Advertise

17 October 2021

18.10.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

18.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ಕಾಸರಗೋಡು, ಬಂಟ್ವಾಳ ಹಾಗೂ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಡುಪಿಯ ದಕ್ಷಿಣ ಭಾಗದಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕೊಡಗಿನ ವಿರಾಜಪೇಟೆ, ಭಾಗಮಂಡಲ ಸುತ್ತಮುತ್ತ, ಮೈಸೂರು ಉತ್ತರ, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಕ್ಷಿಣ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಮಹಾರಾಷ್ಟ್ರದ ಮಧ್ಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚೆನೆ ಇದೆ. 
ಆದರೆ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೂ ಉತ್ತರ ಕರ್ನಾಟಕದ ನದಿಗಳ ನೀರಿನ ಮಟ್ಟ ಸ್ವಲ್ಪ ಏರಿಕೆಯಾಗಬಹುದು. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...