Advertise

01 December 2021

02.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

02.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮ ಮಹಾರಾಷ್ಟ್ರದ ಉತ್ತರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ನಾಳೆಯಿಂದ ಪ್ರಭಾವ ಕಡಿಮೆ ಆಗುವ ಲಕ್ಷಣಗಳಿವೆ. 

ಈಗಾಗಲೇ ಬಂಗಾಳಕೂಲ್ಲಿಯ ಅಂಡಮಾನ್ ಭಾಗದಲ್ಲಿ ತಿರುಗುವಿಕೆ ಆರಂಭವಾಗಿದ್ದು, ನಾಳೆಯಿಂದ ಪ್ರಭಲಗೊಳ್ಳುತ್ತಾ ಪಶ್ಚಿಮೋತ್ತರಕ್ಕೆ ಚಲಿಸುವ ಮುನ್ಸೂಚೆನೆ ಇದೆ. ಉತ್ತರ ಆಂದ್ರಾ, ಒಡಿಸ್ಸಾ, ಪಶ್ಚಿಮ ಬಂಗಾಳ ಕರಾವಳಿ ಮೂಲಕ ಚಲಿಸಿ ಬಂಗ್ಲಾ ಪ್ರವೇಶಿಸಲಿದೆ. 

ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...