10 November 2021

11.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

11.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗಿನ ವಿರಾಜಪೇಟೆ, ಭಾಗಮಂಡಲ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಭಾಗಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ  ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ನಾಳೆ ಅಂದರೆ 11ನೇ ತಾರೀಕಿನಂದು ಮಧ್ಯಾಹ್ನ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ವಾಯುಭಾರವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ತರುವ ಮುನ್ಸೂಚೆನೆ ಇದೆ. 12ನೇ ತಾರೀಕಿನಿಂದ ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದ್ದರೂ ಸಂಪೂರ್ಣ ನಿಲ್ಲುವ ಸಾಧ್ಯತೆ ಕಡಿಮೆ. 

No comments:

Post a Comment