17 November 2021

18.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

18.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮಹಾರಾಷ್ಟ್ರ ಕರಾವಳಿಗೆ ತಲುಪಿದ್ದು ರಾಜ್ಯದ ಮೇಲೆ ಪ್ರಭಾವ ಕಡಿಮೆಯಾಗುತ್ತಿದೆ. 
ಬಂಗಾಳಕೂಲ್ಲಿಯಲ್ಲಿಯ ವಾಯುಭಾರ ಕುಸಿತವು ಸ್ವಲ್ಪ ಪ್ರಭಲಗೊಂಡು ನಾಳೆ ಅಂದರೆ 19ನೇ ತಾರೀಕಿನ ರಾತ್ರಿ ಅಥವಾ 20ರ ಮುಂಜಾನೆ ಆಂದ್ರಾ ಕರಾವಳಿ ತಲುಪಲಿದೆ. ಬಳ್ಳಾರಿ ಹಾಗೂ ರಾಯಚೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 




No comments:

Post a Comment