18 November 2021

19.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

19.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಧಾರವಾಡ, ಉತ್ತರ ಕನ್ನಡ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ. 

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಪಥ ಬದಲಿಸಿದ ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಯಲ್ಲಿ ಬೀಡು ಬಿಟ್ಟಿದೆ. 
ಇವತ್ತು ಸಂಜೆ ಅಥವಾ ರಾತ್ರಿ ಕರಾವಳಿ ದಾಟುವ ಸಾಧ್ಯತೆ ಇದೆ. 

No comments:

Post a Comment