25 November 2021

26.11.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

26.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
 
ದಕ್ಷಿಣ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ರಾಮನಗರದ ಒಂದೆರಡು ಭಾಗಗಳಲ್ಲಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಈಗಿನ ಶ್ರೀಲಂಕಾ ಕರಾವಳಿಯ ವಾಯುಭಾರ ಕುಸಿತದಿಂದ ಯಾವುದೇ ಆತಂಕ ಇಲ್ಲ. 
ಆದರೆ 27, 28 ರಂದು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತದ ಪರಿಣಾಮ ನವೆಂಬರ್ 27ರಿಂದ ಡಿಸೆಂಬರ್ 2ನೇ ತಾರೀಕಿನವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಇದೇ ವೇಳೆಗೆ ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸಣ್ಣ ಪ್ರಮಾಣದ ವಾಯು ನಿಮ್ನತೆ ಉಂಟಾಗಲಿದ್ದು 28ರಿಂದ 3 ದಿವಸಗಳ ಮಟ್ಟಿಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಕನ್ಯಾಕುಮಾರಿ ಕರಾವಳಿಯಲ್ಲಿ ಚಂಡಮಾರುತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ಕೇರಳ ಭಾರಿ ಮಳೆಯಾಗುತ್ತಿದೆ. 


No comments:

Post a Comment