Advertise

31 December 2021

01.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

01.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಈಗಿನ ಮುನ್ಸೂಚೆನೆಯಂತೆ ನಾಳೆ ಅಂದರೆ ಜನವರಿ 1ರಂದು ಸಂಜೆ ಅಥವಾ ರಾತ್ರಿ ಆಗುಂಬೆ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಪ್ರದೇಶಗಳಲ್ಲಿ ಸಹ ತುಂತುರು ಮಳೆಯ ಸಾಧ್ಯತೆ ಇದೆ.
ಬದಲಾಗಬಹುದು. ನೋಡೋಣ. 

30 December 2021

31.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

31.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಒಣಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚೆನೆಯಂತೆ ನಾಳೆಯಿಂದ ಅಂದರೆ ಡಿಸೆಂಬರ್ 31ರಿಂದ ಜನವರಿ 3ರ ತನಕ ಕರಾವಳಿಯ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

29 December 2021

29.12.21ರ ಕರ್ನಾಟಕದ ಹವಾಮಾನ ವರದಿ

29.12.21ರ ಹವಾಮಾನ ವರದಿ :

ಇವತ್ತು ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇರುವ ಮುನ್ಸೂಚೆನೆ ಇದೆ.
ಡಿಸೆಂಬರ್ 30ರಿಂದ ಜನವರಿ 4ನೇ ತಾರೀಕಿನ ವರೆಗೆ ರಾಜ್ಯದ ಹಲವೆಡೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಡಿಸೆಂಬರ್ 30, 31 ಹಾಗೂ ಜನವರಿ 1ನೇ ತಾರೀಕಿನ ತನಕ ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಜನವರಿ 2 ರಿಂದ 4ರ ತನಕ ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

27 December 2021

27ನೇ ತಾರೀಕಿನ ಕರ್ನಾಟಕದ ಹವಾಮಾನ ವರದಿ :

27ನೇ ತಾರೀಕಿನ ಹವಾಮಾನ ವರದಿ :
ಇವತ್ತಿನಿಂದ 3 ದಿವಸಗಳ ಕಾಲ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
 ಇವತ್ತು ಉತ್ತರ ಗುಜರಾತ್, ರಾಜಸ್ತಾನದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದರೆ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

29ರಿಂದ ಜನವರಿ 1ನೇ ತಾರೀಕಿನ ತನಕ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ  ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮೋಡ ಇದ್ದರೂ ಮಳೆಯ ಮುನ್ಸೂಚೆನೆ ಇರುವುದಿಲ್ಲ. 




22 December 2021

ಹವಾಮಾನ ವರದಿ 22.12.21


22.12.21ರ ಹವಾಮಾನ ವರದಿ :

ಇವತ್ತು ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮುಂಜಾನೆ ಭಾರಿ ಹಿಮದ ವಾತಾವರಣ ಇತ್ತು.
ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಇದೇ ವಾತಾವರಣ ಇದ್ದಿರಬಹುದು. 
ಇದು ಮುಂದಿನ 4 ಅಥವಾ 5 ದಿನಗಳಲ್ಲಿ ದಿನಗಳಲ್ಲಿ ಛಳಿ ಕಡಿಮೆ ಆಗುವ ಮುನ್ಸೂಚೆನೆ ಇರಬಹುದು. 

ಈಗಿನ ಪ್ರಕಾರ ಡಿಸೆಂಬರ್ 26ರ ನಂತರ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಡಿಸೆಂಬರ್ 29ರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 



15 December 2021

16.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

16.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಮತ್ತು ಅಲ್ಲಲ್ಲಿ ತುಂತುರು ಮಳೆ ಮುನ್ಸೂಚೆನೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಚದುರಿದ ಮೋಡದ ವಾತಾವರಣ ಇದ್ದರೂ ಮಳೆಯ ಮುನ್ಸೂಚೆನೆ ಇರುವುದಿಲ್ಲ.


ಈಗಿನ ಪ್ರಕಾರ ಕರಾವಳಿಯ ಮೋಡ ಮಳೆಯ ವಾತಾವರಣವು ನಾಳೆಯ ತನಕ ಇದ್ದು, 17ರಿಂದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

14 December 2021

15.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

15.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಮುನ್ಸೂಚೆನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.


 ಡಿಸೆಂಬರ್ 15 ಮತ್ತು 16 ರಂದು ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ವಾತಾವರಣ ಇರಬಹುದು. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. 

13 December 2021

14.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


14.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಬೆಂಗಳೂರಿನ ಅಲ್ಲಲ್ಲಿ, ಮಾಗಡಿ, ಕುಣಿಗಲ್ ಸುತ್ತಮುತ್ತ ಮಳೆಯ ಮುನ್ಸೂಚೆನೆ ಇದೆ. 

 ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

12 December 2021

13.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

13.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗಗಳಲ್ಲಿ, ಆಗುಂಬೆ ಹಾಗೂ ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. 

ಈಗಿನ ಮೋಡ ಮತ್ತು ಮಳೆಯ ವಾತಾವರಣವು ಡಿಸೆಂಬರ್ 14ರ ವರೆಗೆ ಮುಂದುವರಿಯುವ ಮುನ್ಸೂಚೆನೆ ಇದ್ದು. 15 ರಿಂದ ರಾಜ್ಯದಾದ್ಯಂತ ಒಣ ಹವೆ ಮತ್ತು ಛಳಿ ಹೆಚ್ಚಾಗುವ ಮುನ್ಸೂಚೆನೆ ಇದೆ. 

11 December 2021

12.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

12.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ವಿಟ್ಲ, ಬಂಟ್ವಾಳ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
 ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸ್ವಲ್ಪ ಮೋಡ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ.

ಈ ವಾತಾವರಣವು ಡಿಸೆಂಬರ್ 14ರ ವರೆಗೆ ಮುಂದುವರಿಯುವ ಮುನ್ಸೂಚೆನೆ ಇದ್ದು. 15 ರಿಂದ ರಾಜ್ಯದಾದ್ಯಂತ ಛಳಿ ಜಾಸ್ತಿಯಾಗುವ ಮುನ್ಸೂಚೆನೆ ಇದೆ. 

10 December 2021

11.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

11.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ, ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. 

ಜಾವದ್ ಚಂಡಮಾರುತವು ಸಂಪೂರ್ಣ ಶಿಥಿಲಗೊಂಡ ನಂತರ ಈಗ ಹಿಂಗಾರು ಪುನಃ ಪ್ರಭಲಗೊಂಡಂತೆ ತೋರುತ್ತಿದೆ. ಈಗಿನ ಪ್ರಕಾರ ಈ ಮಳೆಯ ವಾತಾವರಣವು ಡಿಸೆಂಬರ್ 14ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ಆಮೇಲೆ ಛಳಿ ಆರಂಭವಾಗಬಹುದು. 

09 December 2021

10.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

10.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬೆಳಗಾವಿ, ವಿಜಾಪುರ, ಬಳ್ಳಾರಿ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮಳೆಯ ವಾತಾವರಣವು ಡಿಸೆಂಬರ್ 14ರ ವರೆಗೆ ಮುಂದುವರಿಯುವ ಮುನ್ಸೂಚೆನೆ ಇದೆ. ಆಮೇಲೆ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ. 

06 December 2021

07.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

07.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ಬಿಸಿಲಿನ ಜೊತೆ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಡಿಸೆಂಬರ್ 9 ಅಂದರೆ ಕುಕ್ಕೆಸುಬ್ರಹ್ಮಣ್ಯ ಷಷ್ಠಿಯ ತನಕ ಅಡಿಕೆಗೆ ಟರ್ಪಾಲ್ ಮುಚ್ಚುವುದು ಕ್ಷೇಮ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮತ್ತು ಸಂಜೆ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಅಡಿಕೆಗೆ 10 ರೂ ಏರಿಕೆ


ಮೊದಲಿನಿಂದಲೂ ಒಂದು ಪ್ರತೀತಿ ಇದೆ. ಕ್ಯಾಂಪ್ಕೊ ಮಹಾಸಭೆ ಮುಗಿದ ಮೇಲೆ ಅಡಿಕೆ ಧಾರಣೆ ಹಿಂದೆ ಬರುತ್ತದೆ ಎಂದು. ಎಷ್ಟೋ ಅಡಿಕೆ ಬೆಳೆಗಾರರು ಈ ಕಾರಣಕ್ಕೆ ಮಹಾಸಭೆಯ ಮುಂಚೆಯೇ ಅಡಿಕೆ ಮಾರಾಟ ಮಾಡಿದವರೂ ಇದ್ದಾರೆ. 

ಆದರೆ ಈಗ ಕಳೆದ ವರ್ಷ ( ರೂ 375.00 ರಿಂದ 500.00+) ಹಾಗೂ ಈ ವರ್ಷ ಸಹ ( ಇವತ್ತಿನ ದರ ರೂ525.00) ಸಂಪ್ರದಾಯಕ್ಕೆ ಮುಕ್ತಿ ಕೊಟ್ಟು ದರ ಹೆಚ್ಚಿಸಿದ್ದು ಅಭಿನಂದನೀಯ.
ಬೆಳೆಗಾರರಲ್ಲಿ ಸಂಸ್ಥೆಯ ಬಗ್ಗೆ ವಿಶ್ವಾಸ ಹೆಚ್ಚಿಸುವ ಕಾರ್ಯ ಶ್ಲಾಘನೀಯ.

ಈ ನಿಟ್ಟಿನಲ್ಲಿ  ಈಗಿನ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಯ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. 

05 December 2021

06.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

06.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಗಳಲ್ಲಿ ಬಿಸಿಲಿನ ವಾತಾವರಣ ಮುನ್ಸೂಚೆನೆ ಇದೆ. 

ಮೈಸೂರು ಹಾಗೂ ಚಾಮರಾಜನಗರ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಸಂಜೆ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು. 

ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ದಾಟಿ ಪಶ್ಚಿಮ ಬಂಗಾಳದ ಕರಾವಳಿ ತಲುಪಿದೆ. ಕರ್ನಾಟಕ್ಕೆ ಯಾವುದೇ ಪರಿಣಾಮಗಳಿಲ್ಲ. 
ಈಗಿನ ಪ್ರಕಾರ ಉತ್ತರ ಹಾಗೂ ಮಧ್ಯ ಕರ್ನಾಟಕದ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇರುವುದಿಲ್ಲ. 
ಆದರೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಇನ್ನೂ ಎರಡು ಮೂರು ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

04 December 2021

05.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


05.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ಕಾಸರಗೋಡು ಸೇರಿದಂತೆ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ತೋರಿಸುತ್ತಿದೆ. ಆದರೂ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳ ಮಳೆಯ ಪ್ರಭಾವದಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ? ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

03 December 2021

04.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

04.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಇನ್ನು ಈಗಿನ ಪ್ರಕಾರ ಸಧ್ಯಕ್ಕೆ ಮಳೆಯ ಮುನ್ಸೂಚೆನೆ ಇರುವುದಿಲ್ಲ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಗದಗ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಪಾವಗಢ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ನಡುವೆ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದು ಸಂಜೆ ಸ್ವಲ್ಪ ಮೋಡ ಕವಿಯಬಹುದು.



ಚಂಡಮಾರುತ: ಬಂಗಾಳಕೂಲ್ಲಿಯ ಚಂಡಮಾರುತವು ಇಂದು ಉತ್ತರ ಆಂದ್ರಾ ಕರಾವಳಿ ತಲುಪಿ ಒಡಿಸ್ಸಾ ಕರಾವಳಿ ಮೂಲಕ ಮುಂದೆ ಸಾಗಲಿದೆ.
ಚಂಡಮಾರುತವು ಮುಂದೆ ಪಶ್ಚಿಮ ಬಂಗಾಳ ಹಾಗೂ ಬಂಗ್ಲಾ ಕಡೆ ಚಲಿಸುತ್ತಿದ್ದಂತೆಯೇ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಕಡಿಮೆಯಾಗಿ ಒಣ ಹವೆ ಮುಂದುವರಿಯಲಿದೆ. 

02 December 2021

03.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

03.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. 

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

 ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದರೆ, ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಪ್ರಭಲವಾಗಿ ನಾಳೆ ಒರಿಸ್ಸಾ ಕರಾವಳಿ ತಲುಪಲಿದೆ.

01 December 2021

02.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

02.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮ ಮಹಾರಾಷ್ಟ್ರದ ಉತ್ತರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ. ನಾಳೆಯಿಂದ ಪ್ರಭಾವ ಕಡಿಮೆ ಆಗುವ ಲಕ್ಷಣಗಳಿವೆ. 

ಈಗಾಗಲೇ ಬಂಗಾಳಕೂಲ್ಲಿಯ ಅಂಡಮಾನ್ ಭಾಗದಲ್ಲಿ ತಿರುಗುವಿಕೆ ಆರಂಭವಾಗಿದ್ದು, ನಾಳೆಯಿಂದ ಪ್ರಭಲಗೊಳ್ಳುತ್ತಾ ಪಶ್ಚಿಮೋತ್ತರಕ್ಕೆ ಚಲಿಸುವ ಮುನ್ಸೂಚೆನೆ ಇದೆ. ಉತ್ತರ ಆಂದ್ರಾ, ಒಡಿಸ್ಸಾ, ಪಶ್ಚಿಮ ಬಂಗಾಳ ಕರಾವಳಿ ಮೂಲಕ ಚಲಿಸಿ ಬಂಗ್ಲಾ ಪ್ರವೇಶಿಸಲಿದೆ. 

ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆ ಆಗುವ ಮುನ್ಸೂಚೆನೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...