04 December 2021

05.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ


05.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ : 

ಕಾಸರಗೋಡು ಸೇರಿದಂತೆ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ತೋರಿಸುತ್ತಿದೆ. ಆದರೂ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳ ಮಳೆಯ ಪ್ರಭಾವದಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ? ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

No comments:

Post a Comment