30 December 2021

31.12.21ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

31.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಒಣಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚೆನೆಯಂತೆ ನಾಳೆಯಿಂದ ಅಂದರೆ ಡಿಸೆಂಬರ್ 31ರಿಂದ ಜನವರಿ 3ರ ತನಕ ಕರಾವಳಿಯ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

No comments:

Post a Comment