26 January 2022

27.01.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.01.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

No comments:

Post a Comment