Advertise

28 February 2022

03.03.22ರ ವಾಯುಭಾರ ಕುಸಿತದ ಪರಿಣಾಮದ ಮುನ್ಸೂಚೆನೆ

ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಉಂಟಾದ ತೀವ್ರ ಚಂಡಮಾರುತದ ಪರಿಣಾಮವಾಗಿ ಬಂಗಾಳಕೂಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ದುರ್ಬಲ ಅಥವಾ ಶಿಥಿಲಗೊಳ್ಳುತ್ತಲಿದ್ದು ನಿರೀಕ್ಷೆಗಿಂತ ಕಡಿಮೆ ಮಳೆಯಾಗುವ ಮುನ್ಸೂಚೆನೆ ಇದೆ. 

ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಮಾತ್ರ ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಇದರ ಪ್ರಭಾವದಿಂದ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣತೆ ಮತ್ತು ತೇವಾಂಶ ಹೆಚ್ಚಾಗಿ ಒಂದೆರಡು ದಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. ನೋಡೋಣ. 


27 February 2022

03.03.22 ರಿಂದ ಉಂಟಾಗಲಿರುವ ವಾಯುಭಾರ ಕುಸಿತದ ಮುನ್ಸೂಚನಾ ವರದಿ

2022ರ ಶಿವರಾತ್ರಿ ಹಬ್ಬ ಮುಗಿಯುತ್ತಿದ್ದಂತೆ ಈ ವರ್ಷದ ಮೊದಲ ವಾಯುಭಾರ ಕುಸಿತವು ಬಂಗಾಳಕೂಲ್ಲಿಯಲ್ಲಿ ಉಂಟಾಗುವ ಲಕ್ಷಣಗಳಿದ್ದು  ಶ್ರೀಲಂಕಾ ಅಥವಾ ತಮಿಳುನಾಡು ಮೇಲೆ ಮೊದಲ ಧಾಳಿ ನಡೆಸಲಿದೆ.

ಈಗಿನ ಮುನ್ಸೂಚೆನೆಯಂತೆ ಮಾರ್ಚ್ 3 ರಂದು ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಲಿದ್ದು ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಇದರ ಪರಿಣಾಮವಾಗಿ ಮಳೆಯಾಗಲಿದೆ.

ಮಾರ್ಚ್ 7ರ ತನಕ ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

23 February 2022

24.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಕರಾವಳಿ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ್ಯಂತ ಫೆಬ್ರುವರಿ 28ರ ತನಕವೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಯಾವುದೇ ಭಾಗಗಳಲ್ಲಿ ಮಳೆಯ ಸಾಧ್ಯತೆ ಇರುವುದಿಲ್ಲ. 

22 February 2022

23.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಕರ್ನಾಟಕದ ಯಾವುದೇ ಭಾಗಗಳಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆ.

ಈಗಿನ ಮುನ್ಸೂಚೆನೆಯಂತೆ ಫೆಬ್ರುವರಿ 23ರಿಂದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ, ಕೊಡಗು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಮಂಗಳೂರು ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಫೆಬ್ರವರಿ 25ರಿಂದ 28ರ ತನಕ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.

18 February 2022

19.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

19.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ನಾಳೆಯಿಂದ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ 4 ಅಥವಾ 5 ದಿನಗಳಲ್ಲಿ ಮತ್ತೆ ಕರಾವಳಿ ಭಾಗಗಳಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


 ಇವತ್ತು ಬೆಳಿಗ್ಗೆ ಮಡಿಕೇರಿ ಕೆಲವು ಭಾಗಗಳ ಮಳೆಯ ಪ್ರಭಾವದಿಂದ ಕರ್ನಾಟಕ - ಕೇರಳ ಗಡಿಭಾಗಗಳಾದ ಈಶ್ವರಮಂಗಲ, ಬಡಗನ್ನೂರು, ವಿಟ್ಲ ಸುತ್ತಮುತ್ತ ಅನಿರೀಕ್ಷಿತ ಮಳೆಯಾಗಿದೆ.


17 February 2022

18.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚೆನೆ :

ಕೊಡಗಿನ ಸೋಮವಾರಪೇಟೆ, ಮಡಿಕೇರಿ, ಕುಶಾಲನಗರ, ಭಾಗಮಂಡಲ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಜಾಸ್ತಿ ಇರಬಹುದು. 
ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಂದೆರಡು ಕಡೆ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ. 

16 February 2022

17.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ, ಪುತ್ತೂರು, ಕಾಸರಗೋಡು ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದರೆ, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಈ ವಾತಾವರಣವು ಫೆಬ್ರುವರಿ 17 ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. 

15 February 2022

16.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗಿನ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಇದರ ಪ್ರಭಾವದಿಂದ ಸುಬ್ರಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯೂ ಇದೆ.

ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಬಂಗಾಳಕೂಲ್ಲಿಯ ವಾಯುಭಾರ ರೀತಿಯ ತಿರುಗುವಿಕೆಯಿಂದ ಗಾಳಿಯು ಬಂಗಾಳಕೂಲ್ಲಿಯ ಕಡೆಯಿಂದ ನುಗ್ಗಿ ಬರುತ್ತಿರುವ ಕಾರಣ  ಈ ವಾತಾವರಣವು ಸೃಷ್ಠಿಯಾಗಿದೆ. ಇನ್ನೂ ಒಂದು ವಾರ ಈ ವಾತಾವರಣವು ಮುಂದುವರಿಯುವ ಮುನ್ಸೂಚೆನೆ ಇದೆ. 

14 February 2022

15.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಮೈಸೂರು, ಮಂಡ್ಯ, ಆಗುಂಬೆ, ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ ಮತ್ತು ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ 

ನಿನ್ನೆ ದಕ್ಷಿಣ ಕನ್ನಡದ ಒಂದೆರಡು ಭಾಗಗಳಲ್ಲಿ ಹಾಗೂ ಸಕ್ಲೇಶ್ಪುರ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಅನಿರೀಕ್ಷಿತ ಸಾಧಾರಣ ಮಳೆಯಾದ ವರದಿಯಾಗಿದೆ. 

ಇವತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.


ಬಂಗಾಳಕೂಲ್ಲಿಯ ವಾಯುಭಾರ ಕುಸಿತದಂತಹ ತಿರುಗುವಿಕೆ ಅಷ್ಟೇನು ಪ್ರಭಾವಿತವಾಗುವ ಸಾಧ್ಯತೆ ಕಡಿಮೆ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ. 

13 February 2022

14.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


14.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ವಾಯುಭಾರ ಕುಸಿತ :

ಈಗಾಗಲೇ ಉತ್ತರ ಸುಮಾತ್ರ ಸಮೀಪ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದೆ. 
ಈಗಿನ ಪಥದಂತೆ ಫೆಬ್ರುವರಿ 19ರಂದು ತಮಿಳುನಾಡಿನಾದ್ಯಂತ ಮಳೆಯಾಗುವ ಮುನ್ಸೂಚೆನೆ ಇದೆ. 

ಫೆಬ್ರವರಿ 20ರಂದು ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ. 


12 February 2022

13.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.2.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಜೆಲ್ಲೆಗಳ ಅಲ್ಲಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. 

ಕೇರಳ ಮತ್ತು ತಮಿಳುನಾಡು ದಕ್ಷಿಣ ತುದಿ ಭಾಗಗಳಲ್ಲಿ ಹಾಗೂ ಶ್ರೀಲಂಕಾದಾದ್ಯಂತ ಉತ್ತಮ ಮಳೆಯ ಮುನ್ಸೂಚೆನೆ ಇದೆ. 



ಈಗಿನ ಮುನ್ಸೂಚೆನೆಯಂತೆ ಫೆಬ್ರುವರಿ 14ರ ನಂತರ ಬಂಗಾಳಕೂಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಲಿದ್ದು 18 ಅಥವಾ 19ರಂದು ತಮಿಳುನಾಡು ಕರಾವಳಿಯಾದ್ಯಂತ ಉತ್ತಮ ಮಳೆ ಮುನ್ಸೂಚನೆ ಇದ್ದು 20ನೇ ತಾರೀಕಿನಂದು ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ ಕರ್ನಾಟಕದ ದಕ್ಷಿಣ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 





08 February 2022

09.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ.

ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಸ್ವಲ್ಪ ಮೋಡ ಹೆಚ್ಚಿದ್ದು ಒಂದೆರಡು ತುಂತುರು ಹನಿಗಳ ಸಾಧ್ಯತೆ ಇದೆ. 

ಬೆಳಗಾವಿ, ಧಾರವಾಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಸನ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಮುನ್ಸೂಚೆನೆಯಂತೆ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
ಫೆಬ್ರವರಿ 11 ಮತ್ತು 12ನೇ ತಾರೀಕಿನಂದು ದಕ್ಷಿಣ ಕೇರಳದ ಕೊಲ್ಲಂ ಹಾಗೂ ತಿರುವನಂತಪುರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

06 February 2022

07.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಇವತ್ತು ಮತ್ತು ನಾಳೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಇವತ್ತು ಹಾಗೂ ನಾಳೆ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

03 February 2022

04.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಕರಾವಳಿ ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕರಾವಳಿ ಜಿಲ್ಲೆಗಳ ಉಳಿದ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

02 February 2022

03.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗು ಸ್ವಲ್ಪ ಮೋಡ ಹೆಚ್ಚಿದ್ದು ವಿರಾಜಪೇಟೆ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

01 February 2022

02.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಕೊಡಗಿನ ವಿರಾಜಪೇಟೆ ಸುತ್ತಮುತ್ತ ಭಾಗಗಳಲ್ಲಿ ಮೋಡ ಸ್ವಲ್ಪ ಹೆಚ್ಚಿರಲಿದ್ದು ತುಂತುರು ಮಳೆಯ ಸಾಧ್ಯತೆಯೂ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಮುನ್ಸೂಚೆನೆ ಇರುವುದಿಲ್ಲ. ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚೆನೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...