16 February 2022

17.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ, ಪುತ್ತೂರು, ಕಾಸರಗೋಡು ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದರೆ, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗಿನ ಈ ವಾತಾವರಣವು ಫೆಬ್ರುವರಿ 17 ರ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. 

No comments:

Post a Comment