Advertise

18 February 2022

19.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ

19.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ ಸುತ್ತಮುತ್ತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ನಾಳೆಯಿಂದ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆ ಇದ್ದು, ಮುಂದಿನ 4 ಅಥವಾ 5 ದಿನಗಳಲ್ಲಿ ಮತ್ತೆ ಕರಾವಳಿ ಭಾಗಗಳಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚೆನೆ ಇದೆ. ಬದಲಾಗಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


 ಇವತ್ತು ಬೆಳಿಗ್ಗೆ ಮಡಿಕೇರಿ ಕೆಲವು ಭಾಗಗಳ ಮಳೆಯ ಪ್ರಭಾವದಿಂದ ಕರ್ನಾಟಕ - ಕೇರಳ ಗಡಿಭಾಗಗಳಾದ ಈಶ್ವರಮಂಗಲ, ಬಡಗನ್ನೂರು, ವಿಟ್ಲ ಸುತ್ತಮುತ್ತ ಅನಿರೀಕ್ಷಿತ ಮಳೆಯಾಗಿದೆ.


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...