Advertise

31 March 2022

01.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.04.22ರರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ,ಮುನ್ಸೂಚೆನೆ  ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

30 March 2022

31.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.03.22ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ  ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಒಂದೆರಡು ಕಡೆ ಮಳೆಯ  ಮುನ್ಸೂಚನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಮೋಡ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

29 March 2022

30.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಉಳಿದ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

28 March 2022

29.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.


ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಭಾರಿ ಮಳೆಯ ಸಾಧ್ಯತೆ ಕಡಿಮೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ (0-5mm) ಸಾಧ್ಯತೆ ಇರಬಹುದು.

ಅನಿರೀಕ್ಷಿತ ಬದಲಾವಣೆ ಹೊರತು ಪಡಿಸಿ ಈ ಸೂಚನೆ ನೀಡಲಾಗಿದೆ. ಬದಲಾವಣೆಗಳನ್ನು ಆಮೇಲೆ ನೀಡಲಾಗುವುದು. 

27 March 2022

28.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹೆಚ್ಚಿನ ಭಾಗಗಳಲ್ಲಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.


26 March 2022

27.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.03.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಪಶ್ಚಿಮ ದಿಕ್ಕಿಗೆ ಸಾಗುತ್ತಿರುವ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. 

25 March 2022

26.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.


ವಾಯುಭಾರ ಕುಸಿತ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿವು ಅಷ್ಟೇನು ಪ್ರಭಾವಿತವಾಗಿಲ್ಲದಿರುವುದರಿಂದ ಕರ್ನಾಟಕದ ಮೇಲೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಇಲ್ಲ. 

24 March 2022

25.03.23ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ  ಅಥವಾ ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

23 March 2022

24.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

22 March 2022

23.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


23.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದಿದೆ ವಾತಾವರಣ ಹಾಗೂ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ಈಗಾಗಲೆ ಮೈನ್ಮಾರ್ ಕರಾವಳಿಗೆ ಅಪ್ಪಳಿಸಿದ ಅಸನಿ ಚಂಡಮಾರುತವು ಶಿಥಿಲಗೊಳ್ಳಲು ಪ್ರಾರಂಭವಾಗಿದೆ.
ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತದ ಲಕ್ಷಣಗಳಿಲ್ಲ. 

21 March 2022

22.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ  ಇದೆ. 

ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 


ವಾಯುಭಾರ ಕುಸಿತ :
ಈಗಾಗಲೇ ವಾಯುಭಾರ ಕುಸಿತ ತೀವ್ರತೆ ಪಡೆದುಕೊಂಡು 22ನೇ ತಾರೀಕನ ಸಂಜೆ ಮಾನ್ಮಾರ್ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ. 

20 March 2022

21.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗಿನ ಹೆಚ್ಚಿನ ಭಾಗಗಳಲ್ಲಿ, ಆಗುಂಬೆ, ಶಿೃಂಗೇರಿ, ಚಿಕ್ಕಮಗಳೂರಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕಾಸರಗೋಡು ಸೇರಿದಂತೆ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ, ಪುತ್ತೂರು, ಬಂಟ್ವಾಳ ಸುತ್ತಮುತ್ತ ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಮನಗರ, ಹಾಸನ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. 



ವಾಯುಭಾರ ಕುಸಿತ : ಈಗಾಗಲೆ ಅಂಡಮಾನ್ ಪೂರ್ವ ಕರಾವಳಿಯಲ್ಲಿರುವ ವಾಯುಭಾರ ಕುಸಿತವು 23ನೇ ತಾರೀಕಿನಂದು ಮಾನ್ಮಾರ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.


19 March 2022

20.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


20.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದೆ. ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. ಮಧ್ಯಾಹ್ನ ಮೇಲೆ ಮೋಡ ಚದುರಲು ಆರಂಭವಾಗಬಹುದು.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ವಾಯುಭಾರ ಕುಸಿತ : ನಿಕೋಬಾರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಂಡಮಾನ್ ಕರಾವಳಿ ಮೂಲಕ ಚಲಿಸಿ ಮಾರ್ಚ್ 22ನೇ ತಾರೀಕು ಮಧ್ಯಾಹ್ನ ಮೇಲೆ ಬರ್ಮಾ (ಮೇನ್ಮಾರ್) ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ. 

18 March 2022

19.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಸಂಜೆ ಉತ್ತಮ ಮಳೆಯ ಮುನ್ಸೂಚನೆ  ಇದೆ. ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ, ಕಡಬ, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ. 

ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ. 

ಕಾಸರಗೋಡು ಹೊರತು ಪಡಿಸಿ ಕೆರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ವಾಯುಭಾರ ಕುಸಿತ: ಈಗಾಗಲೇ ನಿಕೋಬಾರ್ ಪಶ್ಚಿಮ ಕರಾವಳಿಯಲ್ಲಿ ವಾಯುಭಾರ ಕುಸಿತದ ಆರಂಭಿಕ ಹಂತದಲ್ಲಿರುವ 'ಅಸನಿ' ಚಂಡಮಾರುತವು ಮಾರ್ಚ್ 23 ಅಥವಾ 24ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಹಾಗೂ ಬರ್ಮಾ ಕರಾವಳಿ ಭಾಗಕ್ಕೆ ತಲುಪಲಿದೆ. 

17 March 2022

18.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ ಮೋಡದ ವಾತಾವರಣ ಇರಬಹುದು.
ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಕೊಡಗಿನ ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಭಾಗಗಳಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ.


ವಾಯುಭಾರ ಕುಸಿತ : ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ನಿಕೋಬಾರ್ ದಕ್ಷಿಣ ಭಾಗದಲ್ಲಿ ಈಗಾಗಲೇ ಉಂಟಾಗಿದ್ದು ಮಾರ್ಚ್ 19ರಂದು ನಿಕೋಬಾರ್ ಪೂರ್ವ ಕರಾವಳಿ ಮೂಲಕ ಸಾಕಿ ಅಂಡಮಾನ್ ಪಶ್ಚಿಮ ಕರಾವಳಿಯ ಮೂಲಕ ಮಾರ್ಚ್ 23 ಅಥವಾ 24ರಂದು ಒಡಿಸ್ಸಾ ಅಥವಾ ಪಶ್ಚಿಮ ಬಂಗಾಳದ ಕಡೆಗೆ ಬರುವ ಸಾಧ್ಯತೆ ಇದೆ. 

16 March 2022

17.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ.


ಬಂಗಾಳಕೂಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು.
ಈಗಿನ ಪಥದಂತೆ ವಾಯುಭಾರ ಕುಸಿತವು ಮತ್ತಷ್ಟು ಪೂರ್ವದ ಕಡೆ ಚಲಿಸುವ ಲಕ್ಷಣಗಳಿರುವುದರಿಂದ  ಕರ್ನಾಟಕಕ್ಕೆ ಯಾವುದೇ ಪರಿಣಾಮವಿಲ್ಲ.

ಈಗಿನ ಮುನ್ಸೂಚೆನೆಯಂತೆ ಮಾರ್ಚ್ 20ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

15 March 2022

16.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಮುನ್ಸೂಚನೆ

16.03.22ರ ಬೆಳಿಗ್ಗೆ 8 ಗಂಟೆವರೆಗಿನ  ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆ ಸೇರಿದಂತೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಬಂಟ್ವಾಳ ಹಾಗೂ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 


 ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

 ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ.

11 March 2022

12.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಂಜೆ, ರಾತ್ರಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. (0mm - 5mm, ಕೆಲವು ಭಾಗಗಳಲ್ಲಿ ಹೆಚ್ಚಿರಬಹುದು). 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣ ಇದ್ದು, ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಇದ್ದರೂ ಮಳೆಯ ಸಾಧ್ಯತೆ ಕಡಿಮೆ ಇದ್ದು ಒಣ ಹವೆ ಮುಂದುವರಿಯಲಿದೆ. 

10 March 2022

11.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಸಕ್ಲೇಶ್ಪುರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಈ ವಾತಾವರಣವು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾರ್ಚ್ 13ರ ತನಕ ಮುಂದುವರಿಯುವ ಮುನ್ಸೂಚೆನೆ ಇದ್ದು, ಆಮೇಲೆ ಬಿಸಿಲಿನ ವಾತಾವರಣ ಇರಬಹುದು. 

09 March 2022

10.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಈಗಾಗಲೇ ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಭಾಗಗಳಲ್ಲಿ ಮುಂಜಾನೆಯೇ ಮಳೆಯಾಗಿದ್ದು ಈಗ ಮೋಡದ ವಾತಾವರಣ ಇದೆ. 

ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

08 March 2022

09.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.03.22ರ ಬೆಳಿಗ್ಗೆ 8 ಗಂಟೆವರೆಗಿನ  ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ, ಶಿೃಂಗೇರಿ, ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಅಥವಾ ರಾತ್ರಿ ಮಳೆಯ ಸಾಧ್ಯತೆ ಇದೆ.
ಕಾಸರಗೋಡು, ಪುತ್ತೂರು ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.

07 March 2022

08.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ 


06 March 2022

07.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ. 

ಈಗಿನ ಮುನ್ಸೂಚೆನೆಯಂತೆ ಕೊಡಗು, ಸಕ್ಲೇಶ್ಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ದಕ್ಷಿಣ ಕನ್ನಡದ  ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. 
ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 



05 March 2022

05.03.22 ರ ವಾಯುಭಾರ ಕುಸಿತದ ಚಿತ್ರಣ

05.03.22ರ ವಾಯುಭಾರ ಕುಸಿತದ ಚಿತ್ರಣ ಹಾಗೂ ವರದಿ :

ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ನಾಳೆ ತಮಿಳುನಾಡಿನ ಚೆನೈ ತೀರಕ್ಕೆ ತಲುಪಲಿದೆ ಮತ್ತು ಶಿಥಿಲಗೊಳ್ಳಲು ಪ್ರಾರಂಭವಾಗಲಿದೆ. ಚೆನೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಇದ್ದರೆ ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 

ಈಗಿನ ಪ್ರಕಾರ ಮಾರ್ಚ್ 7 ರಂದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. 
ಮಾರ್ಚ್ 8 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ( ಗುಡುಗು ಸಹಿತ) ಮುನ್ಸೂಚೆನೆ ಇದೆ. 
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಾರ್ಚ್ 13ರ ತನಕ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 

ಬದಲಾವಣೆಗಳನ್ನು ಆಯಾ ಸಮಯಕ್ಕೆ ತಿಳಿಸಲಾಗುವುದು. 


04 March 2022

04.03.22 ಈಗಿನ ವಾಯುಭಾರ ಕುಸಿತದ ಒಂದು ವಿಶ್ಲೇಷಣೆ

ಬಂಗಾಳಕೂಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.

ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ತಲಪುತ್ತಿದ್ದಂತೆ ದುರ್ಬಲಗೊಳ್ಳುವ ನಿರೀಕ್ಷೆ ಇದೆ. 

ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು. 8 ಹಾಗೂ 9 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿಯ ಹಲವೆಡೆ ಮಳೆಯಾಗಲಿದೆ. 

ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಾರ್ಚ್ 13ರ ತನಕವೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. 


02 March 2022

ಬಂಗಾಳಕೂಲ್ಲಿಯ ವಾಯುಭಾರ ಕುಸಿತದ ಮುನ್ಸೂಚನಾ ವರದಿ


ಈಗಿನ ಮುನ್ಸೂಚೆನೆಯಂತೆ ಬಂಗಾಳಕೂಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು 04.03.22ರ ಬೆಳಿಗ್ಗೆ ಉತ್ತರ ಶ್ರೀಲಂಕಾ ಕರಾವಳಿಯ ಮೂಲಕ ಹಾದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. 
04.03.22ರಂದು ಉತ್ತರ ತಮಿಳುನಾಡು ಭಾರಿ ಮಳೆಯ ಮುನ್ಸೂಚೆನೆ ಇದ್ದು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ  ಹ ಮಳೆ ಮುನ್ಸೂಚೆನೆ ಇದೆ. 

5.3.22ರಿಂದ 2 ದಿವಸಗಳ ಮಟ್ಟಿಗೆ  ಕಾಸರಗೋಡು ಸೇರಿದಂತೆ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ, ಮಳೆಯ ಮುನ್ಸೂಚೆನೆ ಇದೆ. 

ಬದಲಾಗಬಹುದು. ತಿಳಿಸಲಾಗುವುದು. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...