Advertise

19 March 2022

20.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


20.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.

ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದೆ. ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. ಮಧ್ಯಾಹ್ನ ಮೇಲೆ ಮೋಡ ಚದುರಲು ಆರಂಭವಾಗಬಹುದು.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ವಾಯುಭಾರ ಕುಸಿತ : ನಿಕೋಬಾರ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಂಡಮಾನ್ ಕರಾವಳಿ ಮೂಲಕ ಚಲಿಸಿ ಮಾರ್ಚ್ 22ನೇ ತಾರೀಕು ಮಧ್ಯಾಹ್ನ ಮೇಲೆ ಬರ್ಮಾ (ಮೇನ್ಮಾರ್) ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...