Advertise

07 April 2022

08.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ  ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ (ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ)  ಮುನ್ಸೂಚನೆ ಇದೆ. 

ಶಿವಮೊಗ್ಗ, ಉಳಿದ ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ 


ವಾಯುಭಾರ ಕುಸಿತ : ಬಂಗಾಳಕೂಲ್ಲಿಯಲ್ಲಿ  ಈಗ ಉಂಟಾಗಿರುವ ವಾಯುಭಾರ ಕುಸಿತವು ಮತ್ತಷ್ಟು ದುರ್ಬಲಗೊಳ್ಳುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ. 
ಆದರೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಹಾಗೂ ಬಾಂಗ್ಲಾದೇಶ, ಮೇಘಾಲಯ, ಅಸ್ಸಾಂ, ರಾಜ್ಯಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆ ಇದೆ. 

No comments:

Post a Comment

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು - ಕರ್ನಾಟಕದ ಗಡಿ ಭಾಗಗಳ ಸುತ...