10 April 2022

11.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

11.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ವಾಯುಭಾರ ಕುಸಿತ : ಉತ್ತರ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಂತಹ ತಿರುಗುವಿಕೆಯಿಂದ ಕೇರಳ ಕರಾವಳಿಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. 

ಕರ್ನಾಟಕಕ್ಕೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಇರದಿದ್ದರೂ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಭಾಗಗಳಲ್ಲಿ ಇನ್ನೆರಡು ದಿನ ಮಳೆಯಯ ವಾತಾವರಣದ ಸಾಧ್ಯತೆ ಇದೆ. 

No comments:

Post a Comment