22 April 2022

23.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 


No comments:

Post a Comment