Advertise

28 April 2022

29.04. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

29.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಮೋಡದ ಪ್ರಮಾಣಕ್ಕೆ ತಕ್ಕಂತೆ ಮಳೆಯಾಗುತ್ತಿಲ್ಲ. ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ.

ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. 


ಮೇ 1ನೇ ತಾರೀಕಿನಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಸಾಧ್ಯತೆ ಹೆಚ್ಚಿದ್ದು, ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನ ಏರಿಕೆಯಾಗಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ವಾತಾವರಣ ಕಾಣಿಸುತ್ತಿದೆ.



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...