Advertise

31 May 2022

01.06.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


01.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ರಾಮನಗರ ಉತ್ತಮ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ,, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ,  ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು : ಈಗಾಗಲೇ ಮುಂಗಾರು ಕೇರಳ ರಾಜ್ಯಕ್ಕೆ ಪ್ರವೇಶಿಸಿದ್ದರೂ ದುರ್ಬಲಗೊಂಡಿದೆ.

ರಾಜ್ಯಕ್ಕೆ ಅಧಿಕೃತವಾಗಿ ಪ್ರವೇಶಿಸಿದ ಮುಂಗಾರು ದುರ್ಬಲವಾಗಿದ್ದು ಈಗಿನ ಪ್ರಕಾರ ಜೂನ್ 7ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಪ್ರಭಲವಾಗುವ ಮುನ್ಸೂಚನೆ ಇದೆ. ಅಲ್ಲಿಯ ತನಕ ದಿನಕ್ಕೆ ಒಂದು ಮಳೆಯ ಸಾಧ್ಯತೆ ಇದೆ. 

30 May 2022

31.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಆಗಾಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಬೆಳಗಾವಿ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು 


ಮುಂಗಾರು : ಹವಾಮಾನ ಇಲಾಖೆ ವರದಿಯಂತೆ ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ ಮುಂಗಾರು ಮಾರುತಗಳು ದಕ್ಷಿಣಕ್ಕೆ ಸರಿದು ಶ್ರೀಲಂಕಾ ಮೂಲಕ ಬಂಗಾಳಕೂಲ್ಲಿ ಪ್ರವೇಶಿಸುತ್ತಿದೆ. ಹಾಗಾಗಿ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ . ಆದರೂ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿ ಭಾಗಗಳಲ್ಲಿ ಮಳೆಯು ಇನ್ನೆರಡು ದಿನಗಳಲ್ಲಿ ಪ್ರಾರಂಭವಾಗುವ ಮುನ್ಸೂಚನೆ ಇದೆ. 

ಮುಂಗಾರು ಆರಂಭಿಕ ದುರ್ಬಲ. 


27 May 2022

27.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗಿನ ಒಂದೆರಡು ಕಡೆ, ಚಾಮರಾಜನಗರ ಒಂದೆರಡು ಕಡೆ, ಉತ್ತರ ಕನ್ನಡ ತೀರ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಉಳಿದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.



ಈಗಿನ ಪ್ರಕಾರ ಮುಂಗಾರು ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ. 

26 May 2022

27.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
(ನಿನ್ನೆಯೂ ಮಳೆಯ ಮುನ್ಸೂಚನೆ ಇತ್ತು. ಆದರೆ ಮಳೆಯಾಗಿಲ್ಲ. ನಿರೀಕ್ಷೆಯಂತೆ ಮೋಡದ ಚಲನೆ ಹಾಗೂ ಗಾಳಿಯ ಒತ್ತಡಗಳಿಲ್ಲ)

ಕೊಡಗು, ಆಗುಂಬೆ, ಮೂಡಿಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು, ಬೆಂಗಳೂರು, ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲಾ ಭಾಗಗಳಲ್ಲಿ ಮೋಡದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.


ದುರ್ಬಲ ಮುಂಗಾರು ಹೀಗೆಯೇ ಮುಂದುವರಿಯಲಿದೆ. 

25 May 2022

26.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಕಾಸರಗೋಡು, ಸುಳ್ಯ, ಪುತ್ತೂರು, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ,  ಬೆಂಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ. 

ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. 


ದುರ್ಬಲ ಮುಂಗಾರು ಹೀಗೆಯೇ ಮುಂದುವರಿಯಲಿದೆ. 


24 May 2022

25.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಮಂಗಳೂರು, ಬಂಟ್ವಾಳ, ಕೊಡಗು, ಆಗುಂಬೆ, ಚಿಕ್ಕಮಗಳೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಗುಡುಗು ಸಹಿತ ಸಾಧ್ಯತೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ.


ಮುಂಗಾರು : ದುರ್ಬಲಗೊಂಡ ಮುಂಗಾರು ಹಾಗೆಯೇ ಮುಂದುವರಿಯಲಿದೆ 

23 May 2022

24.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಮಂಗಳೂರು ಹಾಗೂ ಬಂಟ್ವಾಳ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಬಹುದು. 


ಮುಂಗಾರು : ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿರುವ ಮುಂಗಾರು ದುರ್ಬಲವಾಗಿದೆ ಮತ್ತು ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ಚುರುಕುಗೊಳ್ಳುವ ಲಕ್ಷಣಗಳಿಲ್ಲ. 

22 May 2022

23.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಕೊಡಗು ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
 ದಕ್ಷಿಣ ಕನ್ನಡದ ಮಂಗಳೂರು, ಮೂಡಬಿದರೆ, ಕಾರ್ಕಳ, ಧರ್ಮಸ್ಥಳ ಸುತ್ತಮುತ್ತ ಸಹ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಕನ್ನಡದ ಭಾಗಗಳಲ್ಲಿ ಸಹ ಒಂದೆರಡು ಮಳೆಯ ಸಾಧ್ಯತೆ ಇದೆ. 

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ಈಗಿನ ಈ ವಾತಾವರಣವು ಮೇ 24ರ ವರೆಗೆ ಮುಂದುವರಿಯಲಿದ್ದು, ಆಮೇಲೆ ದಿನದ ಹೆಚ್ಚಿನ ಅವಧಿ ಬಿಸಿಲಿರುವ ಸಾಧ್ಯತೆ ಇದೆ.

ಮುಂಗಾರು : ರಾಜ್ಯದಲ್ಲಿ ಗಾಗಲೇ ಮುಂಗಾರು ವಾತಾವರಣ ಇದ್ದು ಮೇ 27ರಿಂದ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆದರೂ ಆರಂಭದ 10, 12 ದಿನಗಳವರೆಗೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. 

21 May 2022

22.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಹಾಗೂ ಮಂಗಳೂರು ಸುತ್ತಮುತ್ತ ಮಳೆಯ ಮುನ್ಸೂಚೆನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ. ಗಾಳಿ ಬೀಸಿದರೆ ಉಳಿದ ದ. ಕ. ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ

ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.


20 May 2022

21.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಹಾಗೂ ಉಡುಪಿಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ ಜಿಲ್ಲಾಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಈ ಮೇಲ್ಮೈ ಸುಳಿಗಾಳಿ ಪ್ರಭಾವ ಮುಗಿದ ಕೊಡಲೆ ಅಂದರೆ ಮೇ 25ರ ಅಂದಾಜು ಮುಂಗಾರು ಪ್ರವೇಶಿಸುವ ಲಕ್ಷಣಗಳಿದ್ದರೂ ಪ್ರತಿಸಲದಂತೆ ಈ ಬಾರಿಯೂ ಮುಂಗಾರು ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಜೂನ್ 2ನೇ ವಾರದ ತನಕ ಪ್ರಭಲಗೊಳ್ಳುವ ಲಕ್ಷಣಗಳಿಲ್ಲ. 



19 May 2022

20.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ (ನಿರಂತರ) ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ,, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 


18 May 2022

19.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕಡಲ ತೀರದಲ್ಲಿ  ಮೇಲ್ಮೈ ಸುಳಿಗಾಳಿ ತೀವ್ರವಾಗಿದ್ದು ಮೇ 20ರ ತನಕ ಇದೆ ಪರಿಸ್ಥಿತಿ ನಿರ್ಮಾಣವಾಗಲಿದೆ. 

ಕೊಡಗು ಕೆಂಪು ಗುರುತಿನ ಪರಿಧಿಯಲ್ಲಿದೆ. ಭಾರೀ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 



17 May 2022

18.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಮಧ್ಯ ಕೇರಳ ಕಡಲ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾದ ಕಾರಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 
ಇದರ ಪ್ರಭಾವದಿಂದ ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ ಸಹ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 


ಈ ವಾತಾವರಣವು ಮೇ 19ರ ತನಕ ಇರಲಿದ್ದು ಆಮೇಲೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ಮುನ್ಸೂಚನೆ ಇದೆ. 
ಈಗಿನ ಈ ವಿದ್ಯಮಾನದಿಂದ ಮತ್ತೆ ಮುಂಗಾರು ಆರಂಭವಾಗುವ ಸಮಯ ವ್ಯತ್ಯಾಸವಾಗುವ ಸಾಧ್ಯತೆ ಹೆಚ್ಚಿದೆ. 


16 May 2022

17.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ,  ಚಿಕ್ಕಮಗಳೂರು, ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

15 May 2022

16.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ  ವಾತಾವರಣದ ಸಾಧ್ಯತೆ ಇದೆ. 


ವಿಶೇಷ ವರದಿ : ಈಗನ ಮುನ್ಸೂಚೆನೆಯಂತೆ ಇವತ್ತು ಕೇರಳ ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಧ್ಯ ಕೇರಳ Red alert ಇದೆ. 

ನಾಳೆ ಅಂದರೆ ಮೇ 16ರಿಂದ 19ನೇ ತಾರೀಕಿನ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಮೇ 20 ಹಾಗೂ 21 ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 

14 May 2022

15.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚೆನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಹಾಗೂ ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ, ಉಡುಪಿ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೇರಳ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಅಸಾನಿ ಚಂಡಮಾರುತದ ನಂತರವೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಹಾಗೆಯ
 ಮುಂದುವರಿದಿದೆ. 
ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 20ರ ತನಕ ಮೋಡ ಹಾಗೂ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

13 May 2022

14.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಪಾವಗಢ, ಹಾಸನ, ಮಂಡ್ಯ, ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ಮುಂಗಾರು : ಈಗಾಗಲೇ ಮುಂಗಾರು ಮಾದರಿ ವಾತಾವರಣ ಆರಂಭವಾಗಿದ್ದು, ಕರಾವಳಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. 
ಮುಂಗಾರು ಪೂರ್ವ ಮಳೆಯೊಂದಿಗೆ ಮುಂಗಾರು ಸೇರಿಕೊಂಡಿರುವುದರಿಂದ ಮುಂಗಾರು ಮಳೆಯನ್ನು ಪ್ರತ್ಯೇಕಿಸಲು ಸಾಧ್ಯವಾಗುತ್ತಿಲ್ಲ. ಇದು ಮುಂಗಾರು ಮಳೆಯೆ. 


12 May 2022

13.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅಸಾನಿ ಚಂಡಮಾರುತವು ಇವತ್ತು ರಾತ್ರಿ ಅಥವಾ ನಾಳೆ ಮುಂಜಾನೆ ಸಂಪೂರ್ಣ ಶಿಥಿಲಗೊಳ್ಳುವ ಸಾಧ್ಯತೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಉತ್ತರ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ಈಗಿನ ಪ್ರಕಾರ ಕರಾವಳಿಯ ಭಾಗಗಳಲ್ಲಿ ಮೇ 14ರ ತನಕ ಮಳೆ ಮುಂದುವರಿಯುವ ಸಾಧ್ಯತೆ ಇದೆ. 


11 May 2022

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅಸನಿ ಚಂಡಮಾರುತವು ಆಂದ್ರಾದ ಮಚಲೀಪಟ್ಟಣಕ್ಕೆ ಅಪ್ಪಳಿಸಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ (ಸುಳ್ಯ, ಸುಬ್ರಮಣ್ಯ, ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಮಳೆ ಕಡಿಮೆ ಇರಬಹುದು) ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು : ಚಂಡಮಾರುತದ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ.
ಗಾಳಿಯ ಈಗನ ಈ ಚಲನೆಯು ಸ್ವಲ್ಪ ಮಟ್ಟಿಗೆ ದುರ್ಬಲವಾಗಿದ್ದರೂ ಈಗಿನ ಪ್ರಕಾರ ಮೇ 16 ರಿಂದ ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಆಗಬಹುದು. 






10 May 2022

11.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11. 05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅಸನಿ ಚಂಡಮಾರುತವು ಇವತ್ತು ಸಂಜೆ ಆಂದ್ರಾದ ಮಚಲೀಪಟ್ಟಣ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ ಮತ್ತು ಅಲ್ಲೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. 
ಆಂದ್ರಾದ ಭೀಮಾವರಂ, ಎಲೂರು, ವಿಜಯವಾಡ ಹಾಗೂ ತೆನಾಲಿ ಭಾಗಗಳಲ್ಲಿ ಭಾರಿ ಹಾನಿಯಾಗುವ  ಸಂಭವವಿದೆ. 

ಪರಿಣಾಮವಾಗಿ ಕರ್ನಾಟಕದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಮೈಸೂರು, ಚಿತ್ರದುರ್ಗ, ಬಳ್ಳಾರಿ, ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು : "ಅಸನಿ" ಯ ಪ್ರಭಾವದಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ಮೋಡದ ಚಲನೆ ಇದ್ದರೂ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ, ಹಾಗೂ ಮುಂದಿನ 2 ಅಥವಾ 3 ದಿನಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. 



09 May 2022

10.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

<script async custom-element="amp-auto-ads"
        src="https://cdn.ampproject.org/v0/amp-auto-ads-0.1.js">
</script>



10.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

<amp-auto-ads type="adsense"
        data-ad-client="ca-pub-2238016837790847">
</amp-auto-ads>


ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.


ಅಸನಿ ಚಂಡಮಾರುತ : ವಿಶಾಖಪಟ್ಟಣದ ಕಡಲ ಸಮೀಪ ತಲುಪಿರುವ ಚಂಡಮಾರುತವು ಒರಿಸ್ಸಾದ ಕರಾವಳಿ ಮೂಲಕ ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ.

ಚಂಡಮಾರುತವು ಒರಿಸ್ಸಾ ಕಡೆ ಚಲಿಸುತ್ತಿದ್ಯೇದಂತೆಯೆ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಬಹುದು.

<amp-auto-ads type="adsense"
        data-ad-client="ca-pub-2238016837790847">
</amp-auto-ads>


ಮುಂಗಾರು : ಅಸನಿ ಚಂಡಮಾರುತ ಪ್ರಭಾವದಿಂದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ ಇದ್ದರೂ "ಅಸನಿ" ಶಿಥಿಲಗೊಳ್ಳುತ್ತಿದ್ದಂತೆಯೆ ಪಶ್ಚಿಮ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆ ಆಗಿ ಮುಂಗಾರು ತಡವಾಗಿ ಆರಂಭವಾಗಬಹುದು. 

08 May 2022

09.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.05. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಚಂಡಮಾರುತವು ನಿರೀಕ್ಷೆಗಿಂತ ಪ್ರಭಲವಾಗುತ್ತಿದೆ. ಈಗಿನ ಪಥದಂತೆ ಮೇ 10 ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಮೇ 16ರಂದು ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಂಡಮಾರುತದ ಪ್ರಭಾವದಿಂದ ಇವತ್ತು ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಚಂಡಮಾರುತವು ಈಶಾನ್ಯ ರಾಜ್ಯಗಳತ್ತ ತಲಪುತ್ತಿದ್ದಂತೆಯೇ ಇತ್ತ ಪಶ್ಚಿಮ ಕರಾವಳಿಯ ಭಾಗಗಳಲ್ಲಿ ( ಮಹಾರಾಷ್ಟ್ರ, ಗೋವಾ, ಕರ್ನಾಟಕ ಹಾಗೂ ಕೇರಳ ಕರಾವಳಿ) ಮುಂಗಾರು ಮಳೆ ವಾತಾವರಣದ ಉಂಟಾಗುವ ಸಾಧ್ಯತೆ ಇದೆ. 

07 May 2022

08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಧಾರಣ ಮಳೆ ಇರಬಹುದು. 
ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 

ಶಿವಮೊಗ್ಗ ಒಂದೆರಡು ಕಡೆ, ಚಿಕ್ಕಮಗಳೂರು, ಹಾಸನ, ಮೈಸೂರು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ಚಂಡಮಾರುತ : ಈಗನ ಪಥದಂತೆ ಬಂಗಾಳಕೂಲ್ಲಿಯ ಚಂಡಮಾರುತವು ಮೇ 11ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಒರಿಸ್ಸಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ, ಬಾಂಗ್ಲಾದೇಶದ ಕರಾವಳಿಯ ತನಕ ಸಾಗುವ ಸಾಧ್ಯತೆ ಇದೆ. 

ಇದರ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ಗಾಳಿಯ ಚಲನೆ ಇರುವುದರಿಂದ ಮೇ 10ರ ನಂತರ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ಮೋಡಗಳು ಏಳಬಹುದು ಹಾಗೂ ಅಲ್ಲಲ್ಲಿ ಮುಂಗಾರು ರೀತಿಯ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

06 May 2022

07.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.22ರ  ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆ ಜಾಸ್ತಿ ಇರಬಹುದು. 

ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 

ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಂಡಮಾರುತ : ಈಗನ ಪಥದಂತೆ ಚಂಡಮಾರುತವು ಮೇ 11ನೇ ತಾರೀಕಿನಂದು ಒರಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 


07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...