Advertise

02 May 2022

03.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸುಳ್ಯ, ಸುಬ್ರಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 

ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಬಹುದು 


ಚಂಡಮಾರುತ :  ಅರಬ್ಬಿ ಸಮುದ್ರದ ಕಡೆಯಿಂದ ಮುಂಗಾರು ರೀತಿಯ ಗಾಳಿಯ ಚಲನೆ ತೀವ್ರತೆಯಿಂದ ಬಂಗಾಳಕೂಲ್ಲಿಯ ಅಂಡಮಾನ್, ನಿಕೋಬಾರ್ ದ್ವೀಪ ಸಮೀಪ ವಾಯುಭಾರ ಕುಸಿತ ಉಂಟಾಗಲು ವೇದಿಕೆ ಸಜ್ಜಾಗಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತಿತವಾಗುವ ಲಕ್ಷಣಗಳಿವೆ. 

ಈಗಿನ ಪಥದಂತೆ ಮೇ 9 ರಂದು ಮ್ಯಾನ್ಮಾರ್, ತ್ರಿಪುರ, ಮಣಿಪುರ ಭಾಗಗಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 

1 comment:

  1. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆ ಹೊಂದುವ ವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆ ಕಡಿಮೆ ಆಗುವ ಸಾಧ್ಯತೆ ಇದೆ. ಹವಾಮಾನ ವಿವರದ ನಕ್ಷೆ ಕೊಟ್ಟ ನಿಮಗೆ ಧನ್ಯವಾದಗಳು 🙏🏼💐🙏🏼😃❤✌❤

    ReplyDelete

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...