Advertise

07 May 2022

08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಧಾರಣ ಮಳೆ ಇರಬಹುದು. 
ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. 

ಶಿವಮೊಗ್ಗ ಒಂದೆರಡು ಕಡೆ, ಚಿಕ್ಕಮಗಳೂರು, ಹಾಸನ, ಮೈಸೂರು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ಚಂಡಮಾರುತ : ಈಗನ ಪಥದಂತೆ ಬಂಗಾಳಕೂಲ್ಲಿಯ ಚಂಡಮಾರುತವು ಮೇ 11ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಒರಿಸ್ಸಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ, ಬಾಂಗ್ಲಾದೇಶದ ಕರಾವಳಿಯ ತನಕ ಸಾಗುವ ಸಾಧ್ಯತೆ ಇದೆ. 

ಇದರ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ಗಾಳಿಯ ಚಲನೆ ಇರುವುದರಿಂದ ಮೇ 10ರ ನಂತರ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ಮೋಡಗಳು ಏಳಬಹುದು ಹಾಗೂ ಅಲ್ಲಲ್ಲಿ ಮುಂಗಾರು ರೀತಿಯ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...