Advertise

08 May 2022

09.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.05. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಚಂಡಮಾರುತವು ನಿರೀಕ್ಷೆಗಿಂತ ಪ್ರಭಲವಾಗುತ್ತಿದೆ. ಈಗಿನ ಪಥದಂತೆ ಮೇ 10 ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಮೇ 16ರಂದು ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಂಡಮಾರುತದ ಪ್ರಭಾವದಿಂದ ಇವತ್ತು ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಚಂಡಮಾರುತವು ಈಶಾನ್ಯ ರಾಜ್ಯಗಳತ್ತ ತಲಪುತ್ತಿದ್ದಂತೆಯೇ ಇತ್ತ ಪಶ್ಚಿಮ ಕರಾವಳಿಯ ಭಾಗಗಳಲ್ಲಿ ( ಮಹಾರಾಷ್ಟ್ರ, ಗೋವಾ, ಕರ್ನಾಟಕ ಹಾಗೂ ಕೇರಳ ಕರಾವಳಿ) ಮುಂಗಾರು ಮಳೆ ವಾತಾವರಣದ ಉಂಟಾಗುವ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...