Advertise

11 May 2022

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಅಸನಿ ಚಂಡಮಾರುತವು ಆಂದ್ರಾದ ಮಚಲೀಪಟ್ಟಣಕ್ಕೆ ಅಪ್ಪಳಿಸಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ (ಸುಳ್ಯ, ಸುಬ್ರಮಣ್ಯ, ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಮಳೆ ಕಡಿಮೆ ಇರಬಹುದು) ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು : ಚಂಡಮಾರುತದ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ.
ಗಾಳಿಯ ಈಗನ ಈ ಚಲನೆಯು ಸ್ವಲ್ಪ ಮಟ್ಟಿಗೆ ದುರ್ಬಲವಾಗಿದ್ದರೂ ಈಗಿನ ಪ್ರಕಾರ ಮೇ 16 ರಿಂದ ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಆಗಬಹುದು. 






No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...