23 May 2022

24.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಮಂಗಳೂರು ಹಾಗೂ ಬಂಟ್ವಾಳ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇರಬಹುದು. 


ಮುಂಗಾರು : ಈಗಾಗಲೇ ರಾಜ್ಯಕ್ಕೆ ಕಾಲಿಟ್ಟಿರುವ ಮುಂಗಾರು ದುರ್ಬಲವಾಗಿದೆ ಮತ್ತು ಈಗಿನ ಮುನ್ಸೂಚೆನೆಯಂತೆ ಮುಂದಿನ 10 ದಿನಗಳವರೆಗೂ ಚುರುಕುಗೊಳ್ಳುವ ಲಕ್ಷಣಗಳಿಲ್ಲ. 

No comments:

Post a Comment