25 May 2022

26.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಕಾಸರಗೋಡು, ಸುಳ್ಯ, ಪುತ್ತೂರು, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ,  ಬೆಂಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆ ಇದೆ. 

ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. 


ದುರ್ಬಲ ಮುಂಗಾರು ಹೀಗೆಯೇ ಮುಂದುವರಿಯಲಿದೆ. 


No comments:

Post a Comment