Advertise

01 June 2022

02.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಚಾಮರಾಜನಗರ, ಮೈಸೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಶಿವಮೊಗ್ಗ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಪಾವಗಢ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಉತ್ತಮ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ 


ಈಗಿನ ಮುನ್ಸೂಚೆನೆಯಂತೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆ ಅಂದರೆ ಜೂನ್ 2 ಮತ್ತು 3ನೇ ತಾರರೀಕಿನಂದು ಉತ್ತಮ ಮಳೆಯ ಮುನ್ಸೂಚನೆ ಇದೆ. 


ಮುಂಗಾರು ದುರ್ಬಲತೆ ಮುಂದುವರಿದು, ಈಗಿನ ಪ್ರಕಾರ ಜೂನ್ 8 ಮತ್ತು 9 ರಂದು ಕರ್ನಾಟಕ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚೆನೆ ಇದೆ. ಜೂನ್ 10ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...