Advertise

02 June 2022

03.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


03.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇವತ್ತಿನಿಂದ ಮೂರು ದಿವಸಗಳ ಕಾಲ ಭಾರಿ ಮಳೆಯ (ಮುಂಗಾರು ಪೂರ್ವ) ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದ್ದು ಆಗಾಗ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು : ದುರ್ಬಲತೆ ಮುಂದುವರಿಯುವ ಲಕ್ಷಣಗಳಿವೆ ಮತ್ತು ಜೂನ್ ತಿಂಗಳ ಕೊನೆಯ ತನಕವೂ ದುರ್ಬಲ ಮುಂಗಾರು ಮುಂದುವರಿಯುವ ಸಾಧ್ಯತೆ ಇದೆ. 
ಈಗಿನ ಪ್ರಕಾರ ಮುಂಗಾರು ಮಾರುತಗಳ ಉಗಮವೇ ದುರ್ಬಲಗೊಂಡಂತೆ ತೋರುತ್ತಿದೆ. ಮೇಲಿನ ಚಿತ್ರದಲ್ಲಿ ಗಮನಿಸಬಹುದು. 




No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...