04.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಪಾವಗಢ, ಬಳ್ಳಾರಿ ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ
ಮುಂಗಾರು : ಮುಂಗಾರು ದುರ್ಬಲತೆ ಮುಂದುವರಿಯಲಿದೆ.
ಈಗಿನ ಪ್ರಕಾರ ಜೂನ್ 8 ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಲಕ್ಷಣಗಳಿವೆ.
ಮುಂಗಾರು ಮಳೆ ಕರಾವಳಿಯಲ್ಲಿ ಬಹು ಕ್ಷೀಣ ಎಂದು ಕಾಣುತ್ತದೆ. ಗಾಳಿಯಚಲನೆಯೊಂದಿಗೆ ಮೋಡಗಳು ಭಾರತದ ದಕ್ಷಿಣ ಭಾಗದಲ್ಲಿ ಚಲಿಸುತ್ತಿರುವ ಕಾರಣ ಎಲ್ಲಾ ಮೋಡಗಳು ಘಾಟಿ ಪ್ರದೇಶಕ್ಕೆ ಸಮಾನಾಂತರವಾಗಿ ಚಲಿಸುವ ಕಾರಣ ಮಳೆ ಕ್ಷೀಣ ವಾಗಿದೆ.
ReplyDelete