06 June 2022

07.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಿಜಾಪುರ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. 


ಮುಂಗಾರು : ದುರ್ಬಲಗೊಂಡಿರುವ ಮುಂಗಾರು ಈಗನ ಮುನ್ಸೂಚನೆಯಂತೆ  ಜೂನ್ 12ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕುಗೊಂಡಂತೆ ಕಂಡರೂ ಒಂದೆರಡು ದಿನಗಳಲ್ಲಿ ಮತ್ತೆ ಮಳೆ ಕಡಿಮೆ ಆಗುವ ಲಕ್ಷಣಗಳಿವೆ. 

No comments:

Post a Comment