07 June 2022

08.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ ಮಂಗಳೂರು ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣ ಇರಬಹುದು. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 



ಮುಂಗಾರು : ಈಗನ ಪ್ರಕಾರ ಜೂನ್ 10ರಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ.


No comments:

Post a Comment