Advertise

08 June 2022

09.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಂಗಳೂರು, ಕೋಲಾರ, ರಾಯಚೂರು, ಬಿಜಾಪುರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಗದಗ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 


ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 10ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದ್ದರೂ ಮತ್ತೆರಡು ದಿನಗಳಲ್ಲಿ ದುರ್ಬಲಗೂಳ್ಳುವ ಸಾಧ್ಯತೆ ಇದೆ. 
ಕೇರಳ ಕರಾವಳಿಯಲ್ಲಿ ಮುಂಗಾರು ಮತ್ತೂ ದುರ್ಬಲಗೊಂಡು ಮಹಾರಾಷ್ಟ್ರ ಕರಾವಳಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...