09 June 2022

10.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಚಿಕ್ಕಬಳ್ಳಾಪುರ - ಆಂದ್ರಾ ಗಡಿಭಾಗಗಳಲ್ಲಿ, ಆಗುಂಬೆ ಹಾಗೂ ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

 ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 


ಮುಂಗಾರು : ಕರ್ನಾಟಕದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ ಕರಾವಳಿ ಭಾಗಗಳಲ್ಲಿ ಒಂದೆರಡು ದಿನಗಳಲ್ಲಿ ಮುಂಗಾರು ಚುರುಕಾಗುವ ಲಕ್ಷಣಗಳಿವೆ. 



No comments:

Post a Comment