12 June 2022

13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ದಾವಣಗೆರೆ(ಹರಪನಹಳ್ಳಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು), ಗದಗ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಸ್ವಲ್ಪ ಮಟ್ಟಿಗೆ ಚುರುಕುಗೊಂಡ ಮುಂಗಾರು, ನಾಳೆಯಿಂದ ಅಂದರೆ ಜೂನ್ 13ರಿಂದ ದಕ್ಷಿಣ ಕನ್ನಡ ಹಾಗೂ ಕೇರಳ ಕರಾವಳಿಯಲ್ಲಿ ಮತ್ತೆ ಕ್ಷೀಣಿಸುವ ಲಕ್ಷಣಗಳಿವೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. 

No comments:

Post a Comment