19 June 2022

20.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಧಾರವಾಡ, ಗದಗ, ಬೆಳಗಾವಿ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. 

ಬಾಗಲಕೋಟೆ, ಕೊಪ್ಪಳ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಮುಂಗಾರು : ಕರಾವಳಿ ಭಾಗಗಳಲ್ಲಿ ಮುಂಗಾರು ಜೂನ್ 20ರಿಂದ ಮತ್ತೂ ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಆಗಬಹುದು. 


No comments:

Post a Comment