Advertise

21 June 2022

22.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉತ್ತರ ಕನ್ನಡ ಬಾರಿ ಮಳೆ ಇದ್ದರೆ, ಉಡುಪಿ, ದಕ್ಷಿಣ ಕನ್ನಡ ಸ್ವಲ್ಪ ಕಡಿಮೆ ಇರಬಹುದು. 

ಶಿವಮೊಗ್ಗ, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ದಕ್ಷಿಣ( ಬೆಂಗಳೂರಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ) ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ರಾಮನಗರ, ಉಳಿದ ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ನಿರೀಕ್ಷಿತ ಪ್ರಮಾಣದಲ್ಲಿ ಚುರುಕುಗೊಳ್ಳದ ಮುಂಗಾರು ಇನ್ನೆರಡು ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಸಾಮಾನ್ಯ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...