Advertise

23 June 2022

24.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾದುದರಿಂದ ಇವತ್ತು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. 
ದಕ್ಷಿಣ ಕನ್ನಡ, ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉತ್ತರ ಕನ್ನಡ ಸ್ವಲ್ಪ ಮಳೆ ಹೆಚ್ಚಿರಬಹುದು. 

ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


ಮುಂಗಾರು : ಇನ್ನೆರಡು ದಿನಗಳಲ್ಲಿ ಮಹಾರಾಷ್ಟ್ರ ಕರಾವಳಿಯಲ್ಲಿ ಉಂಟಾಗಿರುವ ವಾಯುನಿಮ್ನತೆ ರೀತಿಯ ವಾತಾವರಣ ಸ್ವಲ್ಪ ತೀವ್ರತೆ ಪಡೆಯಲಿದ್ದು ಜೂನ್ 27ರಂದು ಶಿಥಿಲಗೊಳ್ಳಬಹುದು. ಇದರ ಪರಿಣಾಮದಿಂದ ಪಶ್ಚಿಮ ಕರಾವಳಿಯಾದ್ಯಂತ ಜೂನ್ 28ರಿಂದ ಭಾರಿ ಮಳೆಯ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...