Advertise

25 June 2022

26.06.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ವಿಜಾಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಮುಂಗಾರು : 
ಉತ್ತರ ಮಹಾರಾಷ್ಟ್ರ ಕರಾವಳಿಯಲ್ಲಿ ನಿನ್ನೆಯವರೆಗೆ ಇದ್ದಂತಹ ವಾಯುನಿಮ್ನತೆ ರೀತಿಯ ವಾತಾವರಣವು ಸ್ವಲ್ಪ ಬಲಗೊಂಡಿದ್ದು ವಾಯುಭಾರ ಕುಸಿತದ ರೀತಿಯ ತಿರುಗುವಿಕೆ ಉಂಟಾಗಿದೆ. ಇದು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಲಕ್ಷಣಗಳಿವೆ. 

ಜೂನ್ 28ರಿಂದ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...