Advertise

27 June 2022

28.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. 


ಮುಂಗಾರು : ಗುಜರಾತ್  ಕರಾವಳಿಯಲ್ಲಿದ್ದ  ವಾಯುಭಾರ ಕುಸಿತವು  ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿದ್ದು ಇವತ್ತು ಶಿಥಿಲಗೊಳ್ಳುವ ಸಾಧ್ಯತೆ ಇದೆ. 
ಪಶ್ಚಿಮಕ್ಕೆ ಚಲಿಸಿದ್ದರ ಪರಿಣಾಮವಾಗಿ ಮುಂಗಾರು ನಿರೀಕ್ಷೆಗಿಂತ ಕಡಿಮೆ ಚುರುಕಾಗುವ ಸಾಧ್ಯತೆ ಇದೆ. ಆದರೂ ಕರಾವಳಿಯಾದ್ಯಂತ ಜೂನ್ 28, 29 ರಂದು ಮಳೆ ಜಾಸ್ತಿಯಾಗುವ ಮುನ್ಸೂಚನೆ ಇದ್ದು. ಜೂನ್ 29 ರಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

No comments:

Post a Comment

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...