Advertise

29 June 2022

30.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊನೆಗೂ ಚುರುಕುಗೊಂಡ ಮುಂಗಾರು. 

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಭಟ್ಕಳ, ಹೊನ್ನಾವರ ಭಾರಿ ಮಳೆಯ ಸಾಧ್ಯತೆ ಇದೆ. 

ಕೊಡಗು, ಬೆಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಹಾವೇರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ಕರಾವಳಿಯ ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ಮಧ್ಯ ಒಂದೆರಡು ದಿನ ಮಳೆ ಕಡಿಮೆ ಇರಬಹುದು. 



No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...