Advertise

31 July 2022

01.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಮಂಗಳೂರು ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಹಿಂದೂಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತುಂಬಾ ದುರ್ಬಲಗೊಂಡಿದ್ದರಿಂದ ಇನ್ನೆರಡು ದಿನಗಳಲ್ಲಿ 
ಮುಂಗಾರು ಚುರುಕಾಗುವ ಲಕ್ಷಣಗಳಿವೆ. ಇವತ್ತಿನಿಂದ ಕೇರಳದಾದ್ಯಂತ ಉತ್ತಮ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...