07.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಚಾಮರಾಜನಗರ, ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಈಗಿನ ಮುನ್ಸೂಚನೆಯಂತೆ ಜುಲೈ 8ರ ತನಕ ರಾಜ್ಯದಾದ್ಯಂತ ಉತ್ತಮ ಮುಂಗಾರು ಮಳೆಯಾಗಲಿದ್ದು, ಜುಲೈ 9ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.
No comments:
Post a Comment