Advertise

10 July 2022

11.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್  ಜಿಲ್ಲಾ ಭಾಗಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಜುಲೈ 11ರಿಂದ 3 ದಿನಗಳ ಕಾಲ ಮಹಾರಾಷ್ಟ್ರ ಹಾಗೂ ಗುಜರಾತ್ ಅತಿಭಾರಿ ಮಳೆಯ ಮುನ್ಸೂಚನೆ ಇದೆ. 
ಈಗಿನ ಒಡಿಶಾದ ವಾಯುವಿನ ಕಡಿಮೆ ಒತ್ತಡವು ಪಶ್ಚಿಮ ಬಂಗಾಳದ ಕರಾವಳಿ ಕಡೆ ಚಲಿಸಿ  ಜುಲೈ 13ರಂದು ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಲಕ್ಷಣಗಳಿವೆ. 
ಪ್ರಭಲವಾದರೆ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಮಳೆ ಹೆಚ್ಚಾಗಬಹುದು. 

No comments:

Post a Comment

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ.

26.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳ...