Advertise

11 July 2022

12.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚನೆ ಇದೆ. 

ವಾಯುಭಾರ ಕುಸಿತ: ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ರೀತಿಯ ವಿದ್ಯಮಾನದಿಂದಾಗಿ ಮಹಾರಾಷ್ಟ್ರ ಹಾಗೂ ಗುಜರಾತ್ಅ ಬಹುತೇಕ ಭಾಗಗಳಲ್ಲಿ ಅತಿಭಾರಿ ಮಳೆಯ ಮುನ್ಸೂಚನೆ ಇದೆ. 

ಈಗನ ಒಡಿಶಾದ ಕಡಿಮೆ ಒತ್ತಡವು ಜುಲೈ 13ರಂದು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಪರಿಣಾಮಗಳನ್ನು ಇನ್ನಷ್ಟೇ ತಿಳಿಯಬೇಕಾಗಿದೆ. 



No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...