Advertise

12 July 2022

13.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಸಹ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. 

ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ವಾಯುಭಾರ ಕುಸಿತ : ಒಡಿಶಾದ ವಾಯುಭಾರ ಕುಸಿತವು ನಿರೀಕ್ಷಿತ ಮಟ್ಟದಲ್ಲಿ ಪ್ರಬಲಗೊಳ್ಳುತ್ತಿಲ್ಲ. ಇದೇ ಸಮಯದಲ್ಲಿ ಗುಜರಾತ್ ತೀರದಲ್ಲಿ ಉಂಟಾಗುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಕಡಿಮೆ ಆಗುವ ಲಕ್ಷಣಗಳಿವೆ. 


No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...