Advertise

13 July 2022

14.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ  ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ, ಕಾರ್ಕಳ, ಕೊಡಗು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 
ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. 
(ಕಲಬುರ್ಗಿ, ಬೀದರ್ ಭಾರಿ ಮಳೆಯ ಸಾಧ್ಯತೆ ಇದೆ) 

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಒಡಿಶಾದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿದ್ದು, ನಂತರದ ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 15ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...