Advertise

14 July 2022

15.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿ ಬಿಸಿಲು ಹಾಗೂ ಗಾಳಿಮಳೆಯ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಕುಕ್ಕೆಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಭಾಗಗಳಲ್ಲಿ ಬಿಸಿಲು ಕಡಿಮೆ ಇದ್ದು ಮೋಡ ಹಾಗೂ ಗಾಳಿಮಳೆ ಇರಬಹುದು. 

ಕೊಡಗು, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಬಿಸಿಲು ಹಾಗೂ ಗಾಳಿಮಳೆಯ ಮುನ್ಸೂಚನೆ ಇದೆ. 

ಹಾಸನ, ಧಾರವಾಡ, ಬೆಳಗಾವಿ, ಹಾವೇರಿ ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಒಂದೆರಡು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಅವಧಿ ಬಿಸಿಲು ಇದ್ದು ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸ್ವಲ್ಪ ಜಾಸ್ತಿ ಇರಬಹುದು. 


ಒಡಿಶಾದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದಂತೆಯೇ ಗುಜರಾತ್ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಸ್ವಲ್ಪ ಪ್ರಭಲಗೂಳ್ಳುವ ನಿರೀಕ್ಷೆ ಇದೆ. 
ಇದರ ಪರಿಣಾಮವಾಗಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆ ಆಗಲಿದೆ. ಈಗಿನಂತೆ ಇವತ್ತಿನಿಂದ ಕರಾವಳಿ ಸಹಿತ ರಾಜ್ಯದಲ್ಲಿ ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. 

ಆದರೆ ಜುಲೈ 19ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬದಲಾಗಬಹುದು. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...