Advertise

15 July 2022

1607.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಾವಣಗೆರೆ, ಜಿಲ್ಲಾ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ 


No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...