Advertise

19 July 2022

20.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆ ಸಾಧ್ಯತೆ ಇದೆ. 

ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮುಂಗಾರು : ದುರ್ಬಲಗೊಂಡ ಮುಂಗಾರು ಶ್ರೀಲಂಕಾ ದಕ್ಷಿಣ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಆ ಕಡೆಗೆ ಸೆಳೆಯಲ್ಪಡುತ್ತಿದೆ. 
ಪರಿಣಾಮವಾಗಿ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ದುರ್ಬಲಗೊಳ್ಳಲಿದೆ. 


No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...