Advertise

23 July 2022

24.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಕರಾವಳಿಯಲ್ಲಿ ಈ ವಾತಾವರಣ ಜುಲೈ 26ರ ತನಕ ಮುಂದುವರಿಯಬಹುದು. 

ಕೊಡಗು, ಕೋಲಾರ, ಗದಗ, ಬಾಗಲಕೋಟೆ, ವಿಜಾಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಜುಲೈ 26ರಂದು ದಕ್ಷಿಣ ಸುಮಾತ್ರ ಕಡಲ ಸಮೀಪ ಪ್ರಭಲವಾದ ವಾಯುಭಾರ ಕುಸಿತ ಉಂಟಾಗಲಿದ್ದು, ಮುಂಗಾರು ಮಾರುತಗಳ ಮೇಲೆ ತೀವ್ರವಾದ ಪ್ರಭಾವ ಬೀರುವ ಸಾಧ್ಯತೆಯಿದೆ. 
ಮುಂಗಾರು ಅತಿ ದುರ್ಬಲವಾಗಬಹುದು. 
ಪರಿಣಾಮವಾಗಿ ರಾಜ್ಯದಾದ್ಯಂತ ಅದರಲ್ಲೂ ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಹಿಂಗಾರು ರೀತಿಯ ಮಳೆಯ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...